ಹೊನ್ನಾವರ:
ಹೊನ್ನಾವರ ತಾಲೂಕಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ಅಭಿವೃದ್ಧಿ ಇಲಾಖೆ ಕಛೇರಿ ಆವರಣದಲ್ಲಿ ಬುಧವಾರ ನಡೆಯಿತು.
ತಾಲೂಕು ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `ಆರೋಗ್ಯ ಮುಖೇನ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಉನ್ನತ್ತಿಕರಣ ಸಾಧ್ಯ’ ಎಂದರು. ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಧೀಶ ಯಶ್ವಂತ ಕುಮಾರ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಮಹೇಶ ಕುರಿಯವರ್ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ವಕೀಲೆ ಶರಾವತಿ ಹೆಗಡೆ ಮತ್ತು ಶಿಲ್ಪಾ ನಾಯ್ಕ ಮಹಿಳಾ ಕಾನೂನು ಕುರಿತು ಮಾಹಿತಿ ನೀಡಿದರು. ವಕೀಲರಾದ ಸುಜಾತಾ ಅಡಿ, ಸುಗುಣ ಕಾಮತ, ಅಂಗನವಾಡಿ ಮೇಲ್ವಿಚಾರಕಿ ಭಾರತಿ ಭಟ್ಟ ಉಪಸ್ಥಿತರಿದ್ದರು. ಉಮಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಕುಸುಮಾ ನಾಯ್ಕ ವಂದಿಸಿದರು.
-gaju
Leave a Comment