ಹೊನ್ನಾವರ:
ಹೊನ್ನಾವರ ತಾಲೂಕಿನ ಆರೊಳ್ಳಿಯ ಸಂತೇಗುಳಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಹೊನ್ನಾವರ ಪಿಎಸ್‍ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮರಳು ಸಮೇತ 2 ಮಿನಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳು ಗಣಿಗರಿಕೆಗೆ ನಿರ್ಬಂಧ ಹೇರಿದ್ದರೂ ನಿಯಮವನ್ನು ಗಾಳಿಗೆ ತೂರಿ ಮರಳು ಸಾಗಾಟ ಮಾಡುತ್ತಿದ್ದರು. ಗುಪ್ತಚರ ಮಾಹಿತಿ ಆಧರಿಸಿ ಸೋಮವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಆರೊಳ್ಳಿ ಕ್ರಾಸ್ ಬಳಿ ದಾಳಿ ನಡೆಸಿದ್ದಾರೆ. 2 ವಾಹನಗಳಲ್ಲಿ 2 ಬರಾಸ್‍ನ 3 ಸಾವಿರ ರೂ. ಮೌಲದ್ಯ ಮರಳನ್ನು ತುಂಬಿಕೊಂಡು ಸಾಗಾಟ ಮಾಡುತ್ತಿದ್ದರು ಎನ್ನಲಗಿದೆ. ದಾಳಿಯಲ್ಲಿ ಆರೋಪಿಗಳು ಮರಳು ತುಂಬಿದ ವಹನವನ್ನು ಬಿಟ್ಟು ಪರಾರಿಯಗಿದ್ದು ತನಿಖೆ ಕೈಗೊಂಡಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-gaju
Leave a Comment