ಹೊನ್ನಾವರ:
ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ಹುಂಡೈ ಅಸೆಂಟ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 88 ಸಾವಿರ ರೂ. ಮೌಲ್ಯದ ಗೋವಾ ಮದ್ಯವನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಕುಮಟಾದಿಂದ ಹೊನ್ನಾವರ ಮಾರ್ಗವಾಗಿ ಹೋಗುತ್ತಿದ್ದ ವೇಳೆ ಮಾಹಿತಿ ಆಧಾರದ ಮೇಲೆ ಹೊನ್ನಾವರ ಪಿಎಸ್ಐ ಆನಂದಮೂರ್ತಿ ನೇತೃತ್ವದ ತಂಡ ಕರ್ಕಿ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ 750 ಎಂ.ಎಲ್ ಅಳತೆಯ ಗ್ರೀನ್ಲ್ಯಾಂಡ್ 552 ಬಾಟಲಿ, 180 ಎಂ.ಎಲ್ ಅಳತೆಯ ಹನಿಗ್ರೇಡ್ ಬ್ರಾಂಡಿ 180 ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಪತ್ತೆಗೆ ತನಿಖೆ ಮುಂದುವರೆದಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-gaju
Leave a Comment