ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ವಿರುಪಸಂದ್ರ ಗ್ರಾಮದ ಯುವಕನೊಬ್ಬ ಎಸ್ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
ಪ್ರದೀಪ್ ವಿಷ ಕುಡಿದ ಯುವಕನಾಗಿದ್ದು, ಅಸ್ವಸ್ಥಗೊಂಡ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಬಾರದೆಂದು ಪ್ರದೀಪ್ ಹಾಗೂ ಆತನ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು.
ಈ ಬಗ್ಗೆ ಅಕ್ರಮ ರಸ್ತೆ ತಡೆಯುವಂತೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಮನವಿ ಸಹ ಮಾಡಿತ್ತು. ಆದರೆ, ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇಂದು ಯುವಕ ವಿಷ ಸೇವಿಸಿದ್ದಾನೆ.
– ಗಣಪತಿ ಹೆಗಡೆ.
Leave a Comment