ಹೊನ್ನಾವರ:
ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಕೆರೆಮನೆ ಆಶ್ರಯದಲ್ಲಿ ಯಕ್ಷಗಾನ ತರಬೇತಿಯ ಬೇಸಿಗೆ ಶಿಬಿರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಯಕ್ಷಾಂಗಣದಲ್ಲಿ ಏ.20 ರಿಂದ ಮೇ.4ರ ವರೆಗೆ 15 ದಿನಗಳ ಕಾಲ ನಡೆಯಲಿದೆ.
15 ದಿನಗಳ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಯಕ್ಷಗಾನದ ತರಬೇತಿಗಾಗಿ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಕ್ಷಗಾನದ ಹೆಜ್ಜೆ ಮತ್ತು ಅಂಗೋಪಾಂಗಗಳ ಕುರಿತು ತರಬೇತಿ ನೀಡಲಾಗುವುದು ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-gaju
Leave a Comment