• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

`ಘರ್‍ವಾಪಸಿ’ ಕಾರ್ಯಕ್ರಮ,

March 30, 2017 by Sachin Hegde Leave a Comment

30 H N R 03333.

 

ಹೊನ್ನಾವರ:

ಬಹುಕಾಲದ ಹಿಂದೆ ಒತ್ತಡಕ್ಕೆ ಮಣಿದು ಹಿಂದೂ ಧರ್ಮದಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬಗಳನ್ನು ಮರಳಿ ಹಿಂದೂ ಮಾತೃಧರ್ಮಕ್ಕೆ ಕರೆತರುವ `ಘರ್‍ವಾಪಸಿ’ ಕಾರ್ಯಕ್ರಮವನ್ನು ರಾಮಸೇನೆಯ ಆಶ್ರಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭಟ್ಕಳದಲ್ಲಿ ಏಪ್ರಿಲ್ 23 ರಂದು ಆಯೋಜಿಸಲಾಗಿದೆ ಎಂದು ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಸಾದ ಅತ್ತಾವರ ತಿಳಿಸಿದರು.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು `ಭಾರತ ದೇಶದ ಪ್ರತಿಯೊಬ್ಬರೂ ಹಿಂದೂಗಳೇ ಆಗಿದ್ದರು. ಬ್ರಿಟಿಷರು ಮತ್ತು ಮೊಗಲರು ದೇಶದ ಮೇಲೆ ಆಕ್ರಮಣ ಮಾಡಿ ಸಂಪತ್ತು ಲೂಟಿ ಹೊಡೆಯುವ ಜೊತೆಯಲ್ಲಿ ಮತಾಂತರವನ್ನು ಮಾಡಿದ್ದರು. ಮತಾಂತರಗೊಂಡವರನ್ನು ಕಾನೂನು ಚೌಕಟ್ಟಿನಲ್ಲಿ ಹಿಂದೂ ಧರ್ಮಕ್ಕೆ ಕರೆತರಲಾಗುತ್ತಿದೆ. ಅವರಿಗೆ ಮುಂದೆ ಸೂಕ್ತ ಭದ್ರತೆಯನ್ನು ನೀಡಿ ಧರ್ಮದ ಮತ್ತು ಮಾನವೀಯತೆಯ ನೆಲೆಯಲ್ಲಿ ಅವರು ಸ್ವಾವಲಂಬಿ ಜೀವನ ನಡೆಸಲು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ರಾಮಸೇನಾದ ಉತ್ತರ ಪ್ರಾಂತ ಕಾರ್ಯದರ್ಶಿ ಶಂಕರ ನಾಯ್ಕ ಭಟ್ಕಳ ಮಾತನಾಡಿ, `ಭಟ್ಕಳ ಹಾಗೂ ಉತ್ತರ ಕನ್ನಡ ಜಿಲ್ಲೆಯ 18 ಕುಟುಂಬಗಳ 50 ಜನರನ್ನು ಘರ್‍ವಾಪಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಕರೆತರಲಾಗುವುದು. ಇವುಗಳಲ್ಲಿ 12 ಮುಸ್ಲಿಂ ಹಾಗೂ 6 ಕ್ರಿಶ್ಚಿಯನ್ ಕುಟುಂಬಗಳು ಸೇರಿವೆ. ಘರ್‍ವಾಪಸಿ’ ಕಾರ್ಯಕ್ರಮವನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭಟ್ಕಳದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಭಾಗದ ಮಠಗಳ ಸ್ವಾಮೀಜಿಯವರು, ಹಿಂದೂಪರ ಸಂಘಟನೆಯ ಪ್ರಮುಖರು ಪಾಲ್ಗೊಳ್ಳುವರು. ಭಟ್ಕಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅವರ ಹೆಸರುಗಳನ್ನು ಈಗಲೇ ಪ್ರಕಟಿಸುವುದಿಲ್ಲ. ಘರ್‍ವಾಪಸಿ ಕಾರ್ಯಕ್ರಮ ಭಟ್ಕಳದಲ್ಲಿ ಯಾವ ಸ್ಥಳದಲ್ಲಿ ನಡೆಯುವುದು ಎಂಬ ವಿವರವನ್ನು ಮುಂದೆ ತಿಳಿಸಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಉಡುಪಿ, ಮಂಡ್ಯ, ಮೈಸೂರು, ಚಿತ್ರದುರ್ಗ ಹಾಗೂ ಇತರ ಭಾಗಗಳಲ್ಲಿ ನಡೆಸಿ ಹಿಂದೂ ಧರ್ಮಕ್ಕೆ ಕರೆತರಾಗುವುದು. ರಾಜ್ಯದಲ್ಲಿ ಲವ್ ಜಿಹಾದ್‍ಗೆ ಒಳಗಾಗಿ ನೆಲೆಯಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ಮಹಿಳೆಯರನ್ನೂ ಹಿಂದೂ ಧರ್ಮಕ್ಕೆ ಮರಳಿ ಕರೆತರುವ ಕೆಲಸವೂ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವಕುಮಾರ ಕರ್ಜೆ, ಕಾನೂನು ಸಲಹೆಗಾರ ಸಂತೋಷ ಉಡುಪಿ, ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

-gaju

 

 

 

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: National News, Other

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,113 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...