ಕುಮಟಾ:
ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು.
ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಪುರಸಭೆ ಅಧ್ಯಕ್ಷ ಸಂತೋಷ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಾಯಕ ಆಯುಕ್ತ ರಮೇಶ ಕಳಸದ್ , ಜಿ.ಪಂ ಸದಸ್ಯ ರತ್ನಾಕರ ನಾಯ್ಕ, ತಾ.ಪಂ ಉಪಾಧ್ಯಕ್ಷೆ ಗೀತಾ ಮುಕ್ರಿ, ತಾ.ಪಂ ಸದಸ್ಯೆ ಯಶೋದಾ ಶೆಟ್ಟಿ, ಪುರಸಭಾ ಸದಸ್ಯರಾದ ಗಂಗು ಮುಕ್ರಿ, ಅನಿತಾ ಮಾಪುರಿ, ತಹಸೀಲ್ದಾರ ಮೇಘರಾಜ ನಾಯಕ, ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಆರ್ ಜಿ ಗುನಗಿ ಮತ್ತಿತರರು ಉಪಸ್ಥಿತರಿದ್ದರು.
Leave a Comment