ಹೊನ್ನಾವರ:
ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ’ ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕಟ್ಟಡ ಶಿಲಾನ್ಯಾಸ ನೆರವೇರಿಸುವರು. ಕರ್ನಾಟಕ ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇ ಗೌಡ ನೀಲನಕ್ಷೆ ಅನಾವರಣಗೊಳಿಸುವರು. ನಾಮಧಾರಿ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಎನ್.ನಾಯ್ಕ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಸೊರಬ ಶಾಸಕ ಮಧು ಬಂಗಾರಪ್ಪ, ಮಾಜಿ ಲೋಕಸಭಾ ಸದಸ್ಯ ಜಿ. ದೇವರಾಯ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಜೆ.ಡಿ.ನಾಯ್ಕ, ಉದ್ಯಮಿ ಯಶೋಧರ ನಾಯ್ಕ, ನಿವೃತ್ತ ಉಪ ಆಯುಕ್ತ ಎಂ.ಟಿ.ನಾಯ್ಕ, ಕಾಸ್ಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಈಶ್ವರ ನಾಯ್ಕ, ಭಟ್ಕಳ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ, ಜಿಲ್ಲಾ ನಾಮಧಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ ಎಚ್.ನಾಯ್ಕ ಇತರರು ಪಾಲ್ಗೊಳ್ಳುವರು
Leave a Comment