• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ

May 2, 2017 by Yuvagni News Leave a Comment

ಕಾರವಾರ:

ಕುಮಟಾ ತಾಲ್ಲೂಕಿನ ಗೋಕರ್ಣದ ಗಂಗಾವಳಿ ಪ್ರದೇಶದಲ್ಲಿ ವಾಸಿಸುತ್ತಿರುವ 8 ಸಲಫಿ ಕುಟುಂಬಗಳ ಮೇಲೆ ಅಲ್ಲಿನ ಸುನ್ನಿ ಸಮುದಾಯದವರು ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಕುರಿತು ದೂರು ನೀಡಿದರೂ ಸಹ ಸ್ಥಳೀಯ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕರ್ನಾಟಕ ಸಲಫಿ ಮೂವ್‌ಮೆಂಟ್‌ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗಾವಳಿ ಪ್ರದೇಶದಲ್ಲಿ ಸುಮಾರು 80ಕ್ಕೂ ಅಧಿಕ ಸುನ್ನಿ ಕುಟುಂಬಗಳಿವೆ. ಅವು ಅಲ್ಲಿರುವ 8 ಸಲಫಿ ಕಟುಂಬಗಳ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಸಮುದಾಯದವರ ವಿವಾಹ ಕಾರ್ಯಗಳಿಗೆ ಬಹಿಷ್ಕಾರ ಹಾಕುವುದು, ಕುಟುಂಬದ ಸದಸ್ಯರಿಗೆ ಜೀವಬೆದರಿಕೆ ಹಾಕುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಲಫಿಗಳ ಅಶ್ಲೀಲ ಚಿತ್ರಗಳನ್ನು ರವಾನಿಸುವ ಕಾರ್ಯವನ್ನು ಮಾಡುತ್ತಿದೆ. ಯಾವುದೋ ಆಮಿಷಕ್ಕೆ ಒಳಗಾಗಿ ಅಥವಾ ಯಾರದೋ ಪ್ರಭಾವಕ್ಕೆ ಒಳಗಾಗಿರುವ ಅಲ್ಲಿನ ಪೊಲೀಸರಿಗೆ ಈ ಕುರಿತು ದೂರು ನೀಡಿದರೂ ಸಹ ಪ್ರಯೋಜನಕ್ಕೆ ಬಾರದಂತಾಗಿದೆ ಎಂದು ಅವರು ದೂರಿದರು.
ಸಲಫಿಗಳು ಇಸ್ಲಾಂನ ಪವಿತ್ರ ಖುರಾನ್ ಹಾಗೂ ಪ್ರವಾದಿಯವರ ಮಾರ್ಗಗಳನ್ನು ಮಾತ್ರ ಅನುಸರಿಸುತ್ತಾರೆ. ಪವಿತ್ರ ಖರಾನ್‌ನಲ್ಲಿ ಹೇಳಿರುವಂತೆ ಮೂರ್ತಿ ಪೂಜೆಗೆ ಯಾವುದೇ ಅವಕಾಶ ಸಲಫಿಗಳಲ್ಲಿ ಇಲ್ಲ. ಆದರೆ ಸುನ್ನಿಗಳು ಮುಸ್ಲಿಮರಲ್ಲಿ ಅಂಧ ವಿಶ್ವಾಸ ಹರಡಿ, ಇಸ್ಲಾಂನ್ನು ವಿರೂಪಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ದರ್ಗಾಗಳಲ್ಲಿ ಗೋರಿಗಳನ್ನು ಕಟ್ಟಿ ಅದಕ್ಕೆ ಪೂಜೆ ಮಾಡಿ, ಆಧ್ಯಾತ್ಮಿಕವಾಗಿ ಜನರನ್ನು ಶೋಷಣೆ ಮಾಡುತ್ತಿದ್ದಾರೆ. ಮೂಢನಂಬಿಕೆಗಳನ್ನು ಹುಟ್ಟು ಹಾಕಿ ಅದರಿಂದ ಹಣಗಳಿಸುವ ತಂತ್ರ ಹೂಡುತ್ತಿದ್ದಾರೆ. ಅಲ್ಲದೇ ಸಲಫಿಗಳು ಐಸಿಸ್‌ಗೆ ನಂಟು ಹೊಂದಿದ್ದವರು ಎಂದು ಬಿಂಬಿಸಿ, ಅನ್ಯಕೋಮಿನ ಜನರು ಅವರ ವಿರುದ್ಧ ದಂಗೆ ಏಳುವಂತೆ ಮಾಡುತ್ತಿದ್ದಾರೆ ಎಂದು ಅವರು ಆಪಾದಿಸಿದರು.
ಗಂಗಾವಳಿಯ ಸುನ್ನಿ ಪಂಗಡದವರ ನಿರಂತರ ದಬ್ಬಾಳಿಕೆ, ದೌರ್ಜನ್ಯಗಳಿಂದಾಗಿ ಅಲ್ಲಿನ ಒಂದು ಕುಟುಂಬ ಬೇರೆಡೆ ಪಲಾಯನ ಮಾಡಿದೆ. ಅವರ ದಬ್ಬಾಳಿಕೆ ತಾಳಲಾರದೆ ಸಂಘಟನೆ ವತಿಯಿಂದ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಅವರಿಗೆ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಅವರಿಗೂ ಸಹ ದೂರು ನೀಡಿದ್ದೇವೆ. ಪೊಲೀಸ್ ಇಲಾಖೆ ಅವರ ಕಾನೂನು ಬಾಹಿರ ಕೃತ್ಯಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭಾವಿಸಿದ್ದು, ಸರ್ಕಾರ ಕೂಡ ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ಅಹ್ಮದ್ ಅನ್ಸಾರ್, ಕಾರ್ಯದರ್ಶಿ ಟಿಎಮ್ ಹನೀಫ್, ಗಂಗಾವಳಿಯ ಸಲಫಿ ಮುಖಂಡ ಮೊಹಮ್ಮದ್ ಹಾರೀಸ್, ಕಾರ್ಯದರ್ಶಿ ರಿಯಾಜ್ ಅಹ್ಮದ್ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, National News Tagged With: ಕುಟುಂಬ, ಕುಮಟಾ, ಗಂಗಾವಳಿ ಪ್ರದೇಶ, ಗೋಕರ್ಣ, ದೌರ್ಜನ್ಯ, ಮೇಲೆ, ವಿವಾಹ, ಸಮುದಾಯದ, ಸಲಫಿ, ಸುನ್ನಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar