ಕಾರವಾರ:
ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮೇ 10ರಂದು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಬೆಳಿಗ್ಗೆ 10ಗಂಟೆಗೆ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸುವರು. ಕಾರವಾರ ಆಕಾಶವಾಣಿ ಕೇಂದ್ರ ಅನ್ನಪೂರ್ಣ ಹೂಗಾರ ಅವರು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಕುರಿತು ಉಪನ್ಯಾಸ ನೀಡುವರು.
Leave a Comment