• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ

May 12, 2017 by Sachin Hegde Leave a Comment

ದಾಂಡೇಲಿ:

ಭಾರತೀಯ ಜನತಾ ಪಕ್ಷದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಜೊಯಿಡಾದಲ್ಲಿ ಮೇ 13 ರಂದು ನಡೆಯಲಿದೆ. ಈ ಸಭೆಯಲ್ಲಿ ಬಾ.ಜ.ಪ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ಜಿಲ್ಲಾ ಉಸ್ತುವಾರಿ ಎನ್.ರವಿಕುಮಾರ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಷೇತ್ರ ಉಸ್ತುವಾರಿ ಎನ್.ಎಸ್. ಹೆಗಡೆ, ಹಾಗೂ ಜಿಲ್ಲೆಯ ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಮಂಡಳ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ಬಾ.ಜ.ಪ ದಾಂಡೇಲಿ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ. ದೇಶಪಾಂಡೆಯವರ ಸ್ವ ಕ್ಷೇತ್ರ ದಾಂಡೇಲಿಯಲ್ಲಿ ಮಟಕಾ, ಜೂಜಾಟಗಳು ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದ್ದಾರೆ. ಇದರಿಂದ ಬಡವರು ಬೀದಿ ಪಾಲಾಗುತ್ತಿದ್ದಾರೆ. ನಗರದಲ್ಲಿ ನಡೆಯುವ ಭಾಗಶಹ ಆ ಎಲ್ಲ ಕಾಮಗಾರಿಗಳೂ ಕಳಪೆಯಿಂದ ಕೂಡಿವೆ. ಈ ಬಗ್ಗೆಯೂ ಪರಿಶೀಲನೆಯಾಗಬೇಕು. ನಗರದ ಎಲ್ಲ ಕಸವನ್ನು ತಂದು ನಗರದ ಮದ್ಯ ಭಾಗದಲ್ಲಿರುವ ಅಂಚೆ ಕಾರ್ಯಾಲಯದ ಹಿಂದುಗಡೆಯ ಖಾಲಿ ಜಾಗದಲ್ಲಿ ಹಾಕಲಾಗುತ್ತಿದೆ. ಇದರಿಂದ ಸುತ್ತ ಮುತ್ತಲಿನ ಪರಿಸರ ಹಾಳಾಗುತ್ತಿದೆ. ಶಾಲೆ ಮತ್ತು ಸರಕಾರಿ ಕಚೇರಿಗಳಿಗೆ ತೊಂದರೆಯಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಸ್ಥಳ ಮಂಜೂರಿಯಾಗಿದ್ದರೂ ಇನ್ನೂ ಕಾರ್ಯಾರಂಭ ಆಗಿಲ್ಲ.
ಪಟೇಲನಗರ, ದೇಶಪಾಂಡೆ ಕಾಲನಿ, ಗಾಂಧಿನಗರ, ಆಶ್ರಯ ಕಾಲೊನಿ, ಜೆ.ಎನ್. ರಸ್ತೆ ಸೇರಿದಂತೆ ನಗರದಲ್ಲಿ ಹಲವೆಡೆ ಅತಿಕ್ರಮಣಗಳು ನಡೆಯುತಿವೆ. ಪುಟಪಾತ್‍ಗಳನ್ನೂ ಆಕ್ರಮಿಸಿದ್ದಾರೆ. ಇದಕ್ಕೆ ಕೆಲವು ನಗರಸಭಾ ಸದಸ್ಯರ ಕುಮ್ಮಕ್ಕೂ ಇದೆ. ಈ ಬಗ್ಗೆ ನಗರಾಡಳಿತ ಗಮನ ಹರಿಸುತ್ತಿಲ್ಲ. ರಸ್ತೆ, ದಾರಿ ದೀಪ, ಸ್ವಚ್ಚತೆಯ ಬಗ್ಗೆ ಕೇಳುವವರೇ ಇಲ್ಲ. ನಗರಾಡಳಿತ ಸಂಪೂರ್ಣವಾಗಿ ಕುಸಿದಿದ್ದು, ಜನರೂ ಬೇಸತ್ತಿದ್ದಾರೆ. ಈ ಬಗ್ಗೆ ಸಚಿವರಾದರೂ ಗಮನ ಹರಿಸಿ ಸರಿ ಪಡಿಸಬೇಕು. ಇಲ್ಲವಾದಲ್ಲಿ ನಗರದ ಜನತೆಯ ಸೇರಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಕಾಂಗ್ರೆಸ್ ಸರಕಾರದ ಎಲ್ಲಾ ಅಭಿವೃದ್ದಿ ಕೆಲಸಗಳು ಜನರ ಮೂಗಿಗೆ ತುಪ್ಪ ಸವರುವ ರೀತಿಯಂತಾಗಿದೆ. ಎಲ್ಲವನ್ಣೂ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬಾ.ಜ.ಪ ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರ ಚೌಹಾಣ, ಸುಭಾಸ ಅರವೇಕರ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರುಗಳಾದ ಅಶೋಕ ಪಾಟೀಲ, ಅಬ್ದುಲ್ ವಹಾಬ ಬಾನ್ಸರಿ, ನಗರ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದೇವಕ್ಕ ಕೆರೆಮನೆ, ಅಲ್ಪ ಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ರಫೀಕ್ ಹುದ್ದಾರ, ನಗರ ಘಟಕದ ಅಧ್ಯಕ್ಷ ರಿಯಾಜ ಖಾನ್, ಪ.ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ್, ಯುವ ಘಟಕದ ಅಧ್ಯಕ್ಷ ಮಂಜುನಾಥ ಪಾಟೀಲ, ಹಿಂದುಳಿದ ವರ್ಗಗಳ ಅಧ್ಯಕ್ಷ ಗುರು ಮಠಪತಿ, ಪ್ರಮುಖರಾದ ಎಮ್.ಎಸ್. ನಾಯ್ಕ, ಚಿದಾನಂದ ಕಲಶೆಟ್ಟಿ ಮುಂತಾದವರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, National News Tagged With: ಆಶ್ರಯ ಕಾಲೊನಿ, ಕಡಿವಾಣ, ಕಲಶೆಟ್ಟಿ, ಕಾರ್ಯದರ್ಶಿ, ಕುಸಿದಿದೆ, ಗಾಂಧಿನಗರ, ಜನತಾ ಪಕ್ಷ, ಜೆ.ಎನ್.ರಸ್ತೆ, ದೇಶಪಾಂಡೆ ಕಾಲನಿ, ನಗರಾಡಳಿತ, ಪ.ಜಾತಿ, ಪಟೇಲನಗರ, ಪ್ರಧಾನ, ಬಸವರಾಜ, ಭಾರತೀಯ, ಮೋರ್ಚಾ, ರಾಜಾರೋಷ, ಸಂಪೂರ್ಣ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar