ಕಾರವಾರ:
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ.
ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಮೇ 21 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. 12 ವರ್ಷದೊಳಗಿನ ವಿದ್ಯಾರ್ಥಿಗಳು ಮತ್ತು 12 ವರ್ಷದ ಮೇಲಿನ ವಿದ್ಯಾರ್ಥಿಗಳಿಗಾಗಿ (18 ವರ್ಷದ ಒಳಗೆ) ಎರಡು ವಿಭಾಗಗಳಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು. ಚಿತ್ರಕಲಾ ಸ್ಪರ್ಧೆಯ ವಿಷಯ: ಜೀವವೈವಿಧ್ಯ ಮತ್ತು ಸುಸ್ಥಿರ ಪ್ರವಾಸೋಧ್ಯಮ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ವಿಜ್ಞಾನ ಕೇಂದ್ರ, ಕೋಡಿಬಾಗ, ಕಾರವಾರದಲ್ಲಿ ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ದೂರವಾಣಿ ಸಂಖ್ಯೆ ಸಂಪರ್ಕಿಸಲು ಕೋರಿದೆ. 8762891448, 08382221448 ಸಂಪರ್ಕಿಸಲು ಕೋರಿದೆ.
Leave a Comment