• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

May 16, 2017 by Sachin Hegde Leave a Comment

ಕಾರವಾರ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ ಕಾರ್ಯಕ್ರಮಗಳಿಗೆÉ 2426. ಲಕ್ಷ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು 2017-18ನೇ ಸಾಲಿನಲ್ಲಿ ಯೋಜನೆ ಮತ್ತು ಯೋಜನೇತರ ಲೆಕ್ಕ ಶಿರ್ಷೀಕೆಯಡಿ ಪ್ರತ್ಯೆಕವಾಗಿ ಯಾವುದೇ ಅನುದಾನ ಒದಗಿಸಿರುವದಿಲ್ಲ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಅದಿನ ಅಧಿಕಾರಿಗಳ ಮತ್ತು ನೌಕರರ ವೇತನಾಂಶಕ್ಕಾಗಿ ಜಿಲ್ಲಾ ಪಂಚಾಯತ್ದಲ್ಲಿ 7663 ಲಕ್ಷ ಹಾಗೂ ತಾಲೂಕು ಪಂಚಾಯತ್ ಅಧಿಕಾರಿ ನೌಕರರ ವೇತನಕ್ಕಾಗಿ 40319.85 ಲಕ್ಷ ಒಟ್ಟು 47982.85 ಲಕ್ಷ ರೂ. ಮಿÀಡಿಸಲಾಗಿದೆ. ಉಳಿದಂತೆ ಜಿಲ್ಲಾ ಪಂಚಾಯತ ಅದೀನ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳ ಸಾದಿಲ್ವಾರು ವೆಚ್ಚ ಮತ್ತು ಇತರೇ ವೆಚ್ಚಕ್ಕಾಗಿ ಜಿಲ್ಲಾ ಪಂಚಾಯತಕ್ಕೆ 16991.89 ಲಕ್ಷ ಮತ್ತು ತಾಲೂಕು ಪಂಚಾಯತಕ್ಕೆ 10937.44 ಲಕ್ಷಗಳನ್ನು ಮೀಸಲಿಡಲಾಗಿದೆ. ಲೆಕ್ಕ ಶೀರ್ಷಿಕೆಗೆ ಸಂಬಂದಿಸಿದಂತೆ ಶಿಕ್ಷಣ, ಗ್ರಾಮೀಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶ್ಚಿಮ ಘಟ್ಟ ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯ ಇಲಾಖೆ, ವಯಸ್ಕರ ಶಿಕ್ಷಣ, ಕ್ರೀಡೆ ಮತ್ತು ಯುವಜನ ಸೇವೆ, ಗ್ರಾಮೀಣ ನೀರು ಪೂರೈಕೆ, ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೌಷ್ಟಿಕ ಆಹಾರ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ, ಸಹಕಾರ, ಪ್ರದೇಶಾಭಿವೃದ್ಧಿ ಮತ್ತು ಇತರ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳು, ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ, ಸಣ್ಣ ನೀರಾವರಿ, ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಗಳು, ರೇಷ್ಮೆ, ರಸ್ತೆ ಮತ್ತು ಸೇತುವೆಗಳು, ಕೈಮಗ್ಗ ಮತ್ತು ಜವಳಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಮತ್ತು ಇತರ ವಲಯಗಳಿಗೆ ಕಳೆದ ಸಾಲಿನಲ್ಲಿ ಒದಗಿಸಿದ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು 2017-18ನೇ ಸಾಲಿಗೆ ಒದಗಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಾನಂದ ಆರ್.ಹೆಗಡೆ, ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಮಣ ಟಿ.ಪಾಟೀಲ,ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡಮನಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕ ಪಂಚಾಯತ್ ಅಧ್ಯಕ್ಷೆ ಮತ್ತು ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, National News Tagged With: Karwar, ಅಂಗವಿಕಲರ, ಅನುಮೋದನೆ, ಅಭಿವೃದ್ಧಿ, ಆಯವ್ಯಯ, ಆರೋಗ್ಯ, ಉತ್ತರ ಕನ್ನಡ, ಕಲ್ಯಾಣ, ಕಾರವಾರ, ಕುಟುಂಬ, ಕೈಮಗ್ಗ, ಗ್ರಾಮೀಣ, ಗ್ರಾಮೋದ್ಯಮ, ಘಟಕ, ಘಟ್ಟ, ಜವಳಿ, ಜಿಲ್ಲಾ, ನಡೆಯಿತು, ನೀರಾವರಿ, ನೀರು, ಪಂಚಾಯತ, ಪಶ್ಚಿಮ, ಪೂರೈಕೆ, ಮಂಡನೆ, ಮತ್ತು, ಮಹಿಳೆ, ಯುವಜನ ಸೇವೆ, ಯೋಜನೆ, ರಸ್ತೆ, ರೇಷ್ಮೆ, ವರ್ಗ, ವಿಶೇಷ, ಶಿಕ್ಷಣ, ಸಣ್ಣ, ಸಣ್ಣ ಉದ್ಯಮಗಳು, ಸಮಾಜ, ಸೇತುವೆ, ಹಿಂದುಳಿದ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar