ಭಟ್ಕಳ:
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ.
ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ಪವಿತ್ರಾ ಎನ್. ಹೇರೂರು ಶೇ.83.83% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿಗೆ ಶೇ.100 ಫಲಿತಾಂಶ ಬಂದಿರುವುದನ್ನು ಸ್ವಾಗತಿಸಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುರೇಶ ನಾಯಕ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲ ಡಾ. ಆರ್. ನರಸಿಂಹಮೂರ್ತಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
Leave a Comment