ಭಟ್ಕಳ:
ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶವನ್ನು ಗಳಿಸುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಸಿ.ಆರ್. ಸ್ಮಿತಾ ಶೇ.99 ಅಂಕಗಳೊಂದಿಗೆ ತಾಲೂಕಿಗೆ 3ನೇ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಪಡೆದಿದ್ದಾಳೆ. ಸುಚಿತಾ ಬಿ. ಶೆಟ್ಟಿ ಶೇ.98, ರವೀನಾ ಡಿ. ನಾಯ್ಕ ಶೇ.95, ಶ್ರೀರಕ್ಷಾ ಚಿತ್ರಾಪುರ ಶೇ.94, ರಚನಾ ಪಂಡಿತ್ ಶೇ.91 ಫಲಿತಾಂಶ ಪಡೆದುಕೊಂಡಿದ್ದಾರೆ. ಉಳಿದ ಎಲ್ಲಾ ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ
Leave a Comment