ಕಾರವಾರ:
ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕ ಎಸ್.ವಿ.ಗಿರೀಶ ತಿಳಿಸಿದ್ದಾರೆ.
Leave a Comment