ದಾಂಡೇಲಿ :
ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.
ಅವರು ಶುಕ್ರವಾರದಂದು ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನಾ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ನಗರ ಸಭಾಧ್ಯಕ್ಷ ನಾಗೇಶ ಸಾಳುಂಕೆ, ನಗರಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, ನಗರಸಭಾ ಸದಸ್ಯರುಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ, ಪ್ರಾಚಾರ್ಯೆ ರಶ್ಮಿ ಗುರವ ಮುಂತಾದವರು ಉಪಸ್ಥಿತರಿದ್ದರು.
Leave a Comment