ಕಾರವಾರ:
2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿ ವಾಹನ ಚಲಿಸುವ ದೈಹಿಕ ಸಾಮಥ್ರ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಕಾರವಾರ ಆರ್.ಟಿ.ಒ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
Leave a Comment