ಕಾರವಾರ:
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ 17 ರೊಳಗೆ ಸಲ್ಲಿಸುವುದು. ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿದಾರರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯುವ ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇಕಡೆ ಹೊಂದಿಕೊಂಡಿರುವಂತೆ 2 ಎಕರೆ ಜಮೀನು ಹೊಂದಿರಬೇಕು. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. (ಶೈಕ್ಷಣಿಕ ಸಾಲಕ್ಕೆ 18ರಿಂದ 30ವರ್ಷಗಳ ಮಿತಿಯಲ್ಲಿರಬೇಕು) ಯೋಜನೆಗಳ ಹೆಚ್ಚಿನ ಮಾಹಿತಿಗಾಗಿ, ನಿಗಮದ ಜಿಲ್ಲಾ ವ್ಯವಾಸ್ಥಾಪಕರು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಹೈಚರ್ಚ ಹತ್ತಿರ ಕಾರವಾರ ದೂರವಾಣಿ ಸಂಖ್ಯೆ 08382-223229) ಸಂಪರ್ಕಿಸಬಹುದು.
Leave a Comment