ಭಟ್ಕಳ:
ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ ಲಕ್ಷ್ಮೀಪತಿ ಗೋಪಾಲಾಚಾರ್ಯರ ನೇತೃತ್ವದಲ್ಲಿ ಕಲ್ಯಾಣೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕಲ್ಯಾಣೋತ್ಸವದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳು ನೆರೆದಿದ್ದ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.
ಕಲ್ಯಾಣೋತ್ಸವ ಕಾರ್ಯಕ್ರಮದ ನಂತರ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಮಂಕಾಳ ವೈದ್ಯ, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಬಿ.ನಾಯ್ಕ, ಪ್ರಮುಖರಾದ ಕೆ.ಆರ್. ನಾಯ್ಕ, ಶ್ರೀಧರ ನಾಯ್ಕ, ಗೋವಿಂದ ನಾಯ್ಕ, ಎಸ್.ಎಂ. ನಾಯ್ಕ, ಕೊಲ್ಲಿಮನೆ ಕುಟುಂಬದ ಪ್ರಮುಖರಾದ ಸೋಮಯ್ಯ ನಾಯ್ಕ, ಮಾದೇವ ನಾಯ್ಕ, ಶ್ರೀಧರ ನಾಯ್ಕ, ಗುರುದÀತ್ತ ನಾಯ್ಕ ಸೇರಿದಂತೆ ಊರಿನ ಪ್ರಮುಖರ ಭಕ್ತರು ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಭಟ್ಕಳ: ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ ಲಕ್ಷ್ಮೀಪತಿ ಗೋಪಾಲಾಚಾರ್ಯರ ನೇತೃತ್ವದಲ್ಲಿ ಕಲ್ಯಾಣೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕಲ್ಯಾಣೋತ್ಸವದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳು ನೆರೆದಿದ್ದ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.
ಕಲ್ಯಾಣೋತ್ಸವ ಕಾರ್ಯಕ್ರಮದ ನಂತರ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಮಂಕಾಳ ವೈದ್ಯ, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಬಿ.ನಾಯ್ಕ, ಪ್ರಮುಖರಾದ ಕೆ.ಆರ್. ನಾಯ್ಕ, ಶ್ರೀಧರ ನಾಯ್ಕ, ಗೋವಿಂದ ನಾಯ್ಕ, ಎಸ್.ಎಂ. ನಾಯ್ಕ, ಕೊಲ್ಲಿಮನೆ ಕುಟುಂಬದ ಪ್ರಮುಖರಾದ ಸೋಮಯ್ಯ ನಾಯ್ಕ, ಮಾದೇವ ನಾಯ್ಕ, ಶ್ರೀಧರ ನಾಯ್ಕ, ಗುರುದÀತ್ತ ನಾಯ್ಕ ಸೇರಿದಂತೆ ಊರಿನ ಪ್ರಮುಖರ ಭಕ್ತರು ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Leave a Comment