ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ.
ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ ಕರ್ನಾಟಕ ಕಡಲ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 1986 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಹಾಗೂ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬ್ಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗಿರುತ್ತಾರೆ ಎಂದು ಕಾರವಾರ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Leave a Comment