ಕಾರವಾರ;
ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು 20ಸಾವಿರ ನಗದು, 10 ಸಾವಿರ ಮೌಲ್ಯದ ಪುಸ್ತಕ ವೋಚರ್ ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು 5 ರಿಂದ 18 ವರ್ಷದೊಳಗಿನ 1 ಅಗಸ್ಟ 1999 ನಂತರ ಹುಟ್ಟಿದವರಾಗಿರಬೇಕು. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಅಸಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ಪೂರಕ ದಾಖಲಾತಿಗಳನ್ನು ಅಥವಾ ಸಂ¨ಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಡಿಕರಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವರು ಜೂನ 15 ರೋಳಗಾಗಿ ನಿಗದಿತ ಅರ್ಜಿ ನಮೂನೆಗಳನ್ನು ದ್ವಿ-ಪ್ರತಿಯಲ್ಲಿ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರವಾರ ಇವರಿಗೆ ಕಳುಹಿಸಲು ಕೋರಲಾಗಿದೆ.
Leave a Comment