ಕಾರವಾರ:
ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು – ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ ನೇರ ಸಾಲ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸಬುದಾರರಿಗೆ ಸಾಲ , ಸಾಂಪ್ರದಾಯಿಕ ವೃತ್ತಿಗಳಿಗೆ ಆರ್ಥಿಕ ನೆರವು, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಆರ್ಥಿಕ ನೆರವು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳಡಿಯಲ್ಲಿ ಪ್ರಸಕ್ತ ಸಾಲಿಗೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಗಳನ್ನು ಅರ್ಜಿದಾರರು ಪಡೆಯಲು ಜೂನ 20 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ,ಮತ್ತು 3ಬಿ ಗೆ ಸೇರಿದವರು ಅರ್ಜಿಯನ್ನು ಸಲ್ಲಿಸಬಹುದು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆÀದಿದ್ದಲ್ಲಿ ಅಂಥಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿ ಹಾಗೂ ಯೋಜನೆಗಳ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಸಿಂ ಮಂಜಿಲ್, 2 ನೆ ಮಹಡಿ, ಖಾದಿಮುಲ್ಲಾ ರಸ್ತೆ, ಹೈ ಚರ್ಚ ಹತ್ತಿರ ಕಾರವಾರ , ದೂರವಾಣಿ ಸಂಖ್ಯೆ : 08382-223229 ಸಂಪರ್ಕಿಸಿ ಪಡೆಯಬಹುದು. ಅಥವಾ ವೆಬ್ ಸೈಟ್ http://www.karnataka.gov.in/dbcdc sಸಂಪರ್ಕಿಸಬಹುದು.
ಸಾಲ ಬೇಕು ಮೊಬೈಲ್ ನಲ್ಲಿ ಅರ್ಜಿ ಹಾಕೊದು ಹೇಗೆ
ಸಾಲ
ಸಾಲ
ನಾನು ಸ್ವಯಂ ಉದ್ಯೋಗ ಮಾಡಬೇಕು ನಾನು ವಾಹನವನ್ನು ಸಬ್ಸಿಡಿಯಲ್ಲಿ ಖರೀದಿಸುವುದು ಹೇಗೆ