ಕಾರವಾರ:
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು.
ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಿಂದ ಬಿಸಿಯೂಟ ಯೋಜನೆಗೆ ಅನುದಾನ ನೀಡುತ್ತಿಲ್ಲ ಎಂದು ದೂರಿದರು. 45ನೇ ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸು ಜಾರಿ ಮಾಡಿ ಎಂದು ಆಗ್ರಹಿಸಿದರು. ಇನ್ನು ಯೋಜನಾ ಕಾರ್ಮಿಕರನ್ನು ಕಾರ್ಮಿಕರೆಂದು ಗುರುತಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಟ ಕೂಲಿ ನೀಡಬೇಕು. ಪಿಂಚಣಿ, ಭವಿಷ್ಯ ನಿಧಿ, ಆರೋಗ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟ ನೌಕರರನ್ನು ಡಿಗೂಪ್ ನೌಕಕರೆಂದು ಪರಿಗಣಿಸಬೇಕು ಮತ್ತು ನೇಮಕಾತಿ ಪತ್ರ ನೀಡಬೇಕು ಎಂದು ಹೇಳಿದರು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಹಾಜರಾತಿ ನೆಪವೂಡ್ಡಿ ಯಾರನ್ನು ಕೆಲಸದಿಂದ ತೆಗೆಯಬಾರದು ಎಂಬ ಬೇಡಿಕೆ ಮುಂದಿಟ್ಟರು. ಸಂಘಟನೆಯ ಪ್ರಮುಖರಾದ ಯಮುನಾ ಗಾಂವ್ಕರ್, ಗಂಗಾ ನಾಯ್ಕ ಇತರರಿದ್ದರು.
Leave a Comment