ಹೊನ್ನಾವರ:
ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೆರಾವಲಿ ಗ್ರಾಮದ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿಮಾಣಗೊಳ್ಳಲಿರುವ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಯ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31(ಬುಧವಾರ) ಮಧ್ಯಾಹ್ನ 12ಕ್ಕೆ ನಡೆಯಲಿದೆ.
ಶಾಸಕ ಮಂಕಾಳ ಎಸ್.ವೈದ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದು ಶಂಕು ಸ್ಥಾಪನೆಯ ನಂತರ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಮಂಜೂರಿ ಮಾಡಿಸಿಕೊಟ್ಟ ಶಾಸಕರನ್ನು ಸನ್ಮಾನಿಸಲಾಗುವುದು’ಎಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment