ದಾಂಡೇಲಿ:
ನಗರದ ಬೆಥನಿ ಶಿಕ್ಷಣ ಸಂಸ್ಥೆಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸೋಮವಾರ ನಡೆಯಿತು.
ಶಾಲೆಯ ಪ್ರವೇಶ ದ್ವಾರವನ್ನು ಮಾವಿನ ತಳಿರಿನಿಂದ ಶೃಂಗರಿಸಲಾಗಿತ್ತು. ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಸಮಾವೇಶಗೊಂಡ ನಂತರ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದ ಜೊತೆ ಸೇರಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸಿಸ್ಟರ್ ಸುಹಾಸಿನಿಯವರು ಶಾಲಾ ನಿತಿ ನಿಯಮಗಳ ಬಗ್ಗೆ ವಿವರಿಸಿ, ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ನಾವು ಸಿದ್ದವಿದ್ದು, ವಿದ್ಯಾರ್ಥಿಗಳು, ಪಾಲಕರು ಶಾಲೆಯ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದರು.
ನಂತರ ಶಾಲಾ ಶಿಕ್ಷಕ, ಶಿಕ್ಷಕಿಯರು ವಾದ್ಯ (ಬೆಂಡ್) ಬಾರಿಸಿ ವಿದ್ಯಾರ್ಥಿಗಳನ್ನು ಶಾಲಾ ಆವರಣದೊಳಗೆ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.
ನಂತರ ನಡೆದ ಸಭ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದಂರ್ಭದಲ್ಲಿ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿದರು. ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು, ಪಾಲಕರು ಉಪಸ್ಥಿತರಿದ್ದರು.
Leave a Comment