ಕಾರವಾರ:
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ತಂಬಾಕು ರಹಿತ ದಿನಾಚರಣೆಯನ್ನು ಆಯೋಜಿಸಲಾಯಿತು.
” ತಂಬಾಕು ಅಭಿವೃದ್ಧಿಗೆ ಮಾರಕ ” ಎಂಬ ಘೋಷ ವಾಕ್ಯದೊಂದಿಗೆ ಜಾಥಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು ತಂಬಾಕು ನಿಷೇದದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ಲೆಕಾರ್ಡ್ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಕ ಕುಮಾರ್, ಕಾರ್ಯಕ್ರಮಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಬಾಪೂಜಿ ಸ್ಕೂಲ್ ನರ್ಸಿಂಗ್, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಸದಸ್ಯರು ಮತ್ತಿತರರು ಭಾಗವಹಿಸಿದರು.
Leave a Comment