• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ

June 7, 2017 by Gaju Gokarna Leave a Comment

ಹೊನ್ನಾವರ
`ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ’ ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು.
ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ’ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಆದರೂ ಅರಣ್ಯ ನಾಶ ಮಾಡುವ ರೂಢಿಸಿಕೊಂಡಿರುವುದು ದೊಡ್ಡ ದುರಂತವಾಗಿದೆ. ನಾವು ನಿರೀಕ್ಷಿತ ಮಟ್ಟದಲ್ಲಿ ಅರಣ್ಯ ಸಂರಕ್ಷಣೆಯ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಭವಿಷ್ಯದಲ್ಲಿ ಉತ್ತಮ ಪರಿಸರ ನಿರ್ಮಾಣವಾಗಲು ಸಾಧ್ಯ ಎಂದರು.
ಉಪ ಅರಣ್ಯ ಸಂರಕ್ಷಾಣಧಿಕಾರಿ ವಸಂತ ರೆಡ್ಡಿ ಕೆ.ವಿ. ಮಾತನಾಡಿ ಅಂತರ್ಜಲದ ಉಳಿವಿಗೆ ಹಾಗೂ ಮನುಷ್ಯನ ಆರೋಗ್ಯಕರ ಬದುಕಿಗೆ ಕಟ್ಟಕಡೆಯ ಪರಿಹಾರ ಅರಣ್ಯ. ಅರಣ್ಯ ಸಂರಕ್ಷಣೆಯಲ್ಲಿ ಪೂರ್ಣ ಪ್ರಮಾಣದ ಭಾಗವಹಿಸುವಿಕೆ ಇದ್ದರೆ ಮಾತ್ರ ಪರಿಸರ ಸಮತೋಲನ ಸಾಧ್ಯ ಎಂದರು.
ನ್ಯಾಯಾಧೀಶ ಮಧುಸೂಧನ ಭಾಗ್ವತ, ಸಹ ಶಿಕ್ಷಕರಾದ ನಾಗರಾಜ ನಾಯ್ಕ ಮಾತನಾಡಿದರು.
ಶಿರಸಿಯ ಜೇನು ಕೃಷಿ ತಜ್ಞ ಹಾಗೂ ಔಷಧಿ ಸಸ್ಯಗಳ ಪರಿಣಿತ ಮಧುಕೇಶ್ವರ ಹೆಗಡೆಯವರನ್ನು ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ವಲಯ ಅರಣ್ಯಾಧಿಕಾರಿ ಪ್ರವೀಣ ನಾಯಕ ವಂದಿಸಿದರು. ವಲಯ ಅರಣ್ಯಾಧಿಕಾರಿಗಳಾದ ಪಿ.ಎಸ್.ಗೊಂಡ, ಫರಾನಾ ಮಣಿಯಾರ, ಸಿಬ್ಬಂದಿಗಳು ಹಾಗೂ ಜನತಾ ವಿದ್ಯಾಲಯ ಕಾಸರಕೋಡದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್. ಸಿ. ಪ್ರಾಸ್ತವಿಕವಾಗಿ ಮಾತನಾಡಿದರು. ಉಪ ವಲಯ ಅರಣ್ಯಾಧಿಕಾರಿ ಹರಿಶ್ಚಂದ್ರ ಪಟಗಾರ ಕಾರ್ಯಕ್ರಮ ನಿರೂಪಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: honavar, ಅಭಿಯಾನ, ಅರಣ್ಯದ, ಉಳಿವಿ, ಉಳಿವು, ಕಾಂಡ್ಲಾ, ಕಾಸರಕೋಡದ, ಕೇಂದ್ರ, ಛಾಯಾಚಿತ್ರ, ಜೀವವೈವಿಧ್ಯತೆ, ನಮ್ಮೆಲ್ಲರ, ನಿಂದ, ನ್ಯಾಯಾಧೀಶ, ಬೀಜದುಂಡೆ, ಮಾತ್ರ, ಮಾಹಿತಿ, ವೃಕ್ಷಾರೋಪಣ, ಸಾಧ್ಯ, ಸಿ. ಕೆ. ರೆಡ್ಡಿ, ಹಿರಿಯ, ಹೊನ್ನಾವರ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar