• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ

June 10, 2017 by Sachin Hegde Leave a Comment

ಕಾರವಾರ:

ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು ದಶಕಗಳಿಂದ ಇನ್ನು ಕೆಲವು ಶಾಲೆಗಳು ಶತಮಾನೋತ್ಸವಗಳನ್ನು ಕಂಡಿವೆ. ಅಂತಹ ಶಾಲೆಗಳಲ್ಲಿ ಕಲಿತವರು ಇಂದು ವಿವಿಧ ಉನ್ನತ ಹುದ್ದೆಗಳಲ್ಲಿರಬಹುದು. ಅಂತವರು ತಾನು ಕಲಿತ ಶಾಲೆಯನ್ನು ಮರೆಯದೆ, ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ, ತನ್ನ ಶಾಲೆಯ ಶಿಕ್ಷಣದ ಗುಣಮಟ್ಟ ಸುಧಾರಿಸಲು ನಿರಂತರ ಕೊಡುಗೆ ನೀಡಬೇಕು. ಈ ರೀತಿ ಸಮುದಾಯದ ಸಹಕಾರದಿಂದ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಸಾಧ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. `ಈ ಸಭಾಂಗಣದಲ್ಲಿರುವ ಅಧಿಕಾರಿಗಳ ಪೈಕಿ ಸರ್ಕಾರಿ ಶಾಲೆಯಲ್ಲಿ ಕಲಿತವರು ಕೈಎತಿ’್ತ ಎಂದಾಗ ಶೇ.90ರಷ್ಟು ಮಂದಿ ಕೈ ಎತ್ತಿದರು. ತಾವು ಸಹ ಕಲಿತ ಶಾಲೆಯನ್ನು ಮರೆಯದೆ ನೆರವು ನೀಡುವಂತೆ ಅವರು ಮನವಿ ಮಾಡಿದರು.
ಜಿಲ್ಲೆಯ ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಾವು ಭೇಟಿ ನೀಡಿದ ಮೂರು ಶಾಲೆಗಳ ಪರಿಸ್ಥಿತಿಯನ್ನು ಉದಾಹರಿಸಿದರು. `ಕಾರವಾರ ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳಿಗೆ ಡಿಡಿಪಿಐ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಎರಡು ಶಾಲೆಗಳಲ್ಲಿ ಮಕ್ಕಳ ಗ್ರಹಿಕಾ ಸಾಮಥ್ರ್ಯ, ಕಲಿಕೆ ಮಟ್ಟ ಅತ್ಯುತ್ತಮವಾಗಿತ್ತು. ಅಲ್ಲಿನ ಶಿಕ್ಷಕರು ಸಹ ಅತ್ಯುತ್ಸಾಹಿಗಳಾಗಿದ್ದು, ಮಕ್ಕಳೊಂದಿಗೆ ಬೆರೆತು ಕರ್ತವ್ಯ ನಿರ್ವಹಿಸುತ್ತಿದ್ದುದು ಕಂಡು ಬಂತು. ಕಲಿಕಾ ಸಾಮಥ್ರ್ಯ ಕಡಿಮೆ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಡೆ ವಿಶೇಷ ಗಮನ ನೀಡಿರುವುದು ಸ್ಪಷ್ಟವಾಗಿತ್ತು. ಆದರೆ ಮೂರನೇ ಶಾಲೆಯಲ್ಲಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳ ಗುಣಮಟ್ಟ ಅತ್ಯಂತ ಕಳಪೆಯಾಗಿತ್ತು. ಕಲಿಕೆಯ ಸಾಮಾನ್ಯ ಹಂತ ತಲುಪಲು ಅವರಿಗೆ ಸಾಧ್ಯವಾಗಿರಲಿಲ್ಲ. ಶಿಕ್ಷಕರ ಉದಾಸೀನತೆ, ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು.’ ಈ ರೀತಿ ಶಿಕ್ಷಕರು ಮಾಡುವ ತಪ್ಪಿಗೆ ಮಕ್ಕಳ ಭವಿಷ್ಯ ಹಾಳಾಗಬಾರದು ಎಂದು ಅವರು ಎಚ್ಚರಿಕೆ ನೀಡಿದರು.
ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ತಪಾಸಣೆಗೆ ಹೋಗಬೇಕು. ಈ ರೀತಿ ತಪಾಸಣೆಗೆ ಹೋದಾಗ ಕೇವಲ ಹಾಜರಾತಿ ಇತ್ಯಾದಿ ಆಡಳಿತಾತ್ಮಕ ಅಂಶಗಳ ಕಡೆಗೆ ಮಾತ್ರ ಗಮನ ಹರಿಸಿದರೆ ಸಾಲದು. ಗುಣಮಟ್ಟದ ಶಿಕ್ಷಣ ನೀಡಲು ಕೈಗೊಂಡಿರುವ ಕ್ರಮಗಳು, ಈ ಕುರಿತಾದ ಮಾನದಂಡವನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸಿ ಮಾರ್ಗದರ್ಶನ ಮಾಡಬೇಕು. ನಮ್ಮ ಮಕ್ಕಳ ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ಇತರ ಮಕ್ಕಳ ಶಿಕ್ಷಣಕ್ಕೂ ನೀಡಬೇಕು ಎಂದು ಅಧ್ಯಕ್ಷರು ಹೇಳಿದರು.
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಮರ್ಪಕ ನೀರಿನ ಸೌಲಭ್ಯ ಇರುವ ಶೌಚಾಲಯ, ಪ್ರತಿಯೊಬ್ಬ ವಿದ್ಯಾರ್ಥಿಗೆ ಬೆಂಚು ಮತ್ತು ಡೆಸ್ಕ್, ಶಾಲೆಗೆ ಸುತ್ತ ಕಂಪೌಂಡ್, ಸಣ್ಣ ಗಾರ್ಡನ್, ಆಟಿಕೆ ಸಾಮಾಗ್ರಿಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. ಅಂಗನವಾಡಿಗಳನ್ನು ಆದಷ್ಟು ಶಾಲಾ ಆವರಣದಲ್ಲಿ ನಿರ್ಮಿಸಲು ಆದ್ಯತೆ ನೀಡಬೇಕು. ಈ ಮೂಲಕ ಪ್ರಥಮ ತರಗತಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ಸುಲಭವಾಗುತ್ತದೆ. ಅಂಗನವಾಡಿಗಳಲ್ಲಿ ಸಹ ಕಲಿಕಾ ವಾತಾವರಣ ಉತ್ತಮಪಡಿಸಬೇಕು. ಪ್ರಥಮ ತರಗತಿಯಿಂದ ಕಡ್ಡಾಯವಾಗಿ ಇಂಗ್ಲಿಷ್, ಮ್ಯೂಸಿಕ್ ಮತ್ತು ದೈಹಿಕ ಶಿಕ್ಷಣ ತರಗತಿ ಆರಂಭಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಅವರು ಮಾತನಾಡಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಆಟಿಕೆ ಸಾಮಾಗ್ರಿಗಳನ್ನು ಒದಗಿಸಲಾಗಿದೆ. ಪ್ರತಿ ಅಂಗನವಾಡಿಗಳಲ್ಲಿ ಬ್ರಿಟಾನಿಯಾ ಕಂಪೆನಿ ವತಿಯಿಂದ ಬಿಸ್ಕಿಟ್ ನೀಡಲಾಗುತ್ತಿದ್ದು, ರಾಜ್ಯದಲ್ಲಿಯೇ ಕೇವಲ ನಮ್ಮ ಜಿಲ್ಲೆಯಲ್ಲಿ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಆಯೋಗದ ಸದಸ್ಯ ಕೆ.ಬಿ.ರೂಪಾನಾಯ್ಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: Karwar, ಅಧಿಕಾರಿಗಳ, ಅಧ್ಯಕ್ಷೆ ಕೃಪಾ, ಆಳ್ವ, ಉತ್ತರಕನ್ನಡ, ಉನ್ನತೀಕರಣ, ಕಚೇರಿ, ಕಾರವಾರ, ಕುರಿತು, ಜಿಲ್ಲಾಧಿಕಾರಿ, ವಿದ್ಯಾರ್ಥಿ, ಶಾಲೆ, ಸಭಾಂಗಣ, ಸಭೆ, ಸರ್ಕಾರಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar