ದಾಂಡೇಲಿ;
ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ಉತ್ತಮ ಶಿಕ್ಷಣ ಕಲಿತರೆ ಬಾಲ ಕಾರ್ಮಿಕರಾಗುವುದು ತಪ್ಪುತ್ತದೆ. ಶಿಕ್ಷಣದಿಂದ ವಂಚಿತರಾದ ಮಕ್ಕಳು ಹೆಚ್ಚಾಗಿ ಅವರ ಹಸಿವು ನೀಗಿಸಿಕೊಳ್ಳಲು ಬಾಲ ಕಾರ್ಮಿಕರಾಗುತ್ತದೆ. ಅದನ್ನು ಸಮಾಜದ ಪ್ರತಿಯೊಬ್ಬರೂ ತಡೆಯಬೇಕು. ಬಾಲ ಕಾರ್ಮಿಕರನ್ನು ದುಡಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ ಎಂದು ಹೇಳಿ ಶಿಕ್ಷಣದ ಮಹತ್ವ ತಿಳಿಸಿದರು.
ಈ ಸಂದರ್ಭದಲ್ಲಿ ಮಕ್ಕಳು ಕಿರು ನಾಟಕದ ಮೂಲಕ ಬಾಲ ಕಾರ್ಮಿಕರ ಕುರಿತಾಗಿ ಜಾಗೃತಿ ಮೂಡಿಸಿದರು. ಶಿಕ್ಷಣ ಮಂಜಣ್ಣ ಕಾರ್ಯಕ್ರಮ ನಿರ್ವಹಿಸಿದರು.
Leave a Comment