• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ

June 14, 2017 by Sachin Hegde Leave a Comment

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕಾರವಾರದಿಂದ ಹೊನ್ನಾವರದವರೆಗಿನ ಹೆದ್ದಾರಿ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಜಿಲ್ಲಾಧಿಕಾರಿ ಎಸ್.ನಕುಲ್ ಅವರು ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿಯುವ ಸಾಧ್ಯತೆ ಇರುವÀ ಕಡೆಗಳಲ್ಲಿ ಈಗಾಗಲೇ ಐಆರ್‍ಬಿ ಕಂಪೆನಿ ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಅಪಾಯ ಸಂಭವಿಸಬಹುದಾದ ಗುಡ್ಡಗಳನ್ನು ಸರಿಪಡಿಸುವ ಕಾರ್ಯವನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ಸಂದರ್ಭದಲ್ಲಿ ಕಲ್ಲುಗಳು ರಸ್ತೆಗೆ ಬೀಳದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊನ್ನಾವರ ಬಳಿ, ಮಾದನಗೇರಿ, ದೀವಗಿ, ಮಿರ್ಜಾನ್ ಬಳಿ ಶಿರಸಿ ಕ್ರಾಸ್ ಸೇರಿದಂತೆ ಹಲವು ಕಡೆಗಳಲ್ಲಿ ಮಣ್ಣು ಕುಸಿಯುವ ಸಾಧ್ಯತೆಯಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕೇಂದ್ರಸ್ಥಾನದಲ್ಲಿದ್ದು, ನಿರಂತರ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಇದೇ ರೀತಿ ಐಆರ್‍ಬಿ ಸಂಸ್ಥೆಯು ತನ್ನ ಎಲ್ಲಾ ಯಂತ್ರೋಪಕರಣಗಳನ್ನು ಹಾಗೂ ಸಿಬ್ಬಂದಿಗಳನ್ನು 24×7 ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಗುಡ್ಡ ಕುಸಿತದಂತಹ ಅವಘಡದ ಸುದ್ದಿ ಬಂದ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕಾಮಗಾರಿ ಆರಂಭಿಸಲು ಸನ್ನದ್ಧವಾಗಿರಬೇಕು. ಈ ವಿಷಯದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಸದಾಶಿವ ಪ್ರಭು ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು, ಐಅರ್‍ಬಿ ಕಂಪೆನಿಯ ಇಂಜಿನಿಯರ್‍ಗಳು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೊತೆಗಿದ್ದರು.

19224917 457476714606730 5687982674399687748 n 19113727 457476721273396 5858385763895627479 n 19145893 457476674606734 7461023268231168443 n

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: 24x7, ಐಆರ್‍ಬಿ, ಕಂಪೆನಿ, ಕಲ್ಲು, ಕಾಮಗಾರಿ, ಗುಡ್ಡ ಕುಸಿತ, ಚತುಷ್ಪಥ, ಜಿಲ್ಲಾಧಿಕಾರಿ, ತುರ್ತು, ದೀವಗಿ, ಪರಿಶೀಲನೆ, ಮಾದನಗೇರಿ, ಮಿರ್ಜಾನ್, ರಾಷ್ಟ್ರೀಯ, ಶಿರಸಿ ಕ್ರಾಸ್, ಹೆದ್ದಾರಿ, ಹೊನ್ನಾವರ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...