ಹೊನ್ನಾವರ :
ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ.
ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Leave a Comment