ದಾಂಡೇಲಿ;
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ನಗರದ ಅರಿವು ಫೌಂಡೇಶನ್ ಆಶ್ರಯದಲ್ಲಿ ಜೂನ್: 21 ರಂದು ಬೆಳಿಗ್ಗೆ 6.30 ರಿಂದ 8 ಗಂಟೆಯವರೆಗೆ ಸ್ಥಳೀಯ ಸುಭಾಸ ನಗರದಲ್ಲಿರುವ ಒಳ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಂಕಣಕಾರ ಹಾಗೂ ಉಪನ್ಯಾಸಕ ಡಾ: ಆರ್.ಜಿ.ಹೆಗಡೆ, ಡಿವೈಎಸ್ಪಿ ಡಿ.ಎಸ್.ಪವಾರ್, ಹಿರಿಯ ವಕೀಲ ಅಜೀತ.ಎಂ.ನಾಯಕ, ರೋಟರಿ ಕ್ಲಬ್ ಅಧ್ಯಕ್ಷ ರವಿ ನಾಯ್ಕ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಉಪೇಂದ್ರ ಘೋರ್ಪಡೆ, ಪ್ರೆಸ್ ಕ್ಲಬ್ ಕಾರ್ಯದರ್ಶಿ ಯು.ಎಸ್.ಪಾಟೀಲ, ಉಪನ್ಯಾಸಕಿ ಹಾಗೂ ಕವಯತ್ರಿ ನಾಗರೇಖಾ ಗಾಂವಕರ, ಜೊಯಿಡಾ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರೆಹಮಾನ್ ಅವರುಗಳು ಗೌರವ ಉಪಸ್ಥಿತರಿರುತ್ತಾರೆ. ಅಧ್ಯಕ್ಷತೆಯನ್ನು ಅರಿವು ಪೌಂಡೇಶನ್ ಸಂಸ್ಥೆಯ ಅಧ್ಯಕ್ಷ ರೋಶನ್ ನೇತ್ರಾವಳಿ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಯೋಗ ಗುರು ಉದ್ದಂಡಿಯವರಿಂದ ಯೋಗ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಗರದ ಜನತೆ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅರಿವು ಪೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment