• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

July 12, 2017 by Sachin Hegde Leave a Comment

ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ ತೊಡಕಾಗಿದ್ದು, ಇದರ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಡಾ. ಕ್ಯಾಪ್ಟನ್ ರಮೇಶ ರಾವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇದೇ ವೇಗದಲ್ಲಿ ಜನಸಂಖ್ಯೆ ಬೆಳೆದರೆ ದೇಶದ ಜನಸಂಖ್ಯೆ ಮುಂದಿನ 35ವರ್ಷಗಳಲ್ಲಿ 200ಕೋಟಿ ತಲುಪುವ ಸಾಧ್ಯತೆಯಿದೆ. ಪ್ರತಿ ವರ್ಷ ದೇಶದಲ್ಲಿ 1.55ಕೋಟಿ ಜನಸಂಖ್ಯೆ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ 7.75ಲಕ್ಷ ಜನಸಂಖ್ಯೆ ಹೆಚ್ಚುತ್ತಿದೆ. ವಿಶ್ವದ ಜನಸಂಖ್ಯೆಗೆ ಭಾರತದ ಕೊಡುಗೆ ಶೇ.17ರಷ್ಟು ಇದೆ. ಇವರೆಲ್ಲರಿಗೂ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸುವುದು ಸವಾಲಿನ ಕೆಲಸವಾಗಿದೆ. ಮತ್ತು ಬಡತನ ಹಾಗೂ ನಿರುದ್ಯೋಗ ಸಮಸ್ಯೆ ತೀವ್ರವಾಗಿ ಕಾಡಲಿದೆ ಎಂದು ಹೇಳಿದರು. ಕಾರವಾರ ನಗರಸಭೆ ಅಧ್ಯಕ್ಷ ಗಣಪತಿ ವಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಡಿ.ಎಚ್.ಒ ಡಾ. ಶಂಕರ ರಾವ,  ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಸಭಾ ಕಾರ್ಯಕ್ರಮಕ್ಕೆ ಮೊದಲು ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಆರೋಗ್ಯ, ಇದೇ ವೇಗ, ಕಛೇರಿ, ಕಲ್ಪಿಸಲು, ಕಲ್ಯಾಣ, ಕಾರ್ಯಕ್ರಮ, ಕುಟುಂಬ, ಜನಸಂಖ್ಯಾ, ಜನಸಂಖ್ಯೆ, ಡಾ. ಕ್ಯಾಪ್ಟನ್, ತೊಡಕಾಗಿದ್ದು, ದಿನಾಚರಣೆ, ಪ್ರಾಸ್ತಾವಿಕ, ಮತ್ತು, ಮಾತನಾಡಿ, ರಮೇಶ, ರಾವ, ವಿಶ್ವ, ಸಭಾಂಗಣ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar