ಕಾರವಾರ:
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವೆಬ್ ಸೈಟ್ www.ecourts.gov.in http://www.ecourts.gov.in/uttarakannada/online-recruitment ರಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸತಕ್ಕದ್ದು. ಅರ್ಜಿ ಶುಲ್ಕವನ್ನು ವೆಬ್ ಸೈಟ್ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆನ್ ಲೈನ್ ಪೆಮೆಂಟ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಪಾವತಿಸಬಹುದು.
ಒಂದಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವರು ಆಯಾ ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ, ವಯೋಮಿತಿ ಮತ್ತು ಇತರೆ ಮಾಹಿತಿಗಳಿಗಾಗಿ ಜಿಲ್ಲಾ ನ್ಯಾಯಾಲಯದ ಸೂಚನಾಫಲಕವನ್ನು ನೋಡಬಹುದು.
Leave a Comment