ಕಾರವಾರ:
ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ “ನಾಗರಿಕ ಸೇವೆಗಳು ಗಗನ ಕುಸುಮವಲ್ಲ” ಎಂಬ ಮನವರಿಕೆ ಕಾರ್ಯಗಾರ ನಡೆಯಿತು.
ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ ನಾಯ್ಕ, ನಾಮದಾರಿ ಸಮಾಜದ ಜಿಲ್ಲಾಧ್ಯಕ್ಷ ವಿಜಯಕುಮಾರ ನಾಯ್ಕ, ಸುನೀಲ ನಾಯ್ಕ ಸೋನಿ ಇತರರು ಇದ್ದರು. ವಿವಿಧ ಉನ್ನತ ಅಧಿಕಾರಿಗಳು ಭಾಗವಹಿಸಿ ನೂರಾರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗೆ ಗಣ್ಯರು ಉತ್ತರಿಸಿದರು.
Leave a Comment