• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

July 17, 2017 by Sachin Hegde Leave a Comment

ಕಾರವಾರ:

ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್  ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ’ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ ಅದನ್ನು ಟೀಕಿಸಬಹುದು. ಆದರೆ ಅದೆ ರಿತಿ ಅವರು ಮಾಡುವ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಬೇಕು. ಆಗ ಅವರಿಗೂ ಪ್ರೋತ್ಸಾಹ ದೊರೆಯುತ್ತದೆ. ಆದ್ದರಿಂದ ಈ ಬೀಟ್ ವ್ಯವಸ್ಥೆಯಿಂದ ಸಾಕಷ್ಟು ಉಪಯೋಗಗಳಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿದ್ದಲ್ಲಿ ಜಿಲ್ಲೆಯಲ್ಲಿ ಅಪರಾಧಗಳು ನಡೆಯದಂತೆ ತಡೆಗಟ್ಟಲು ಸಾಧ್ಯವಿದೆ ಎಂದರು.  ಪೊಲೀಸರೊಂದಿಗೆ ಸಾರ್ವಜನಿಕರು ಉತ್ತಮ ಸಂಬಂಧವನ್ನು ಹೊಂದುವುದರ ಜತೆಗೆ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಗಟ್ಟಲು ಸುಧಾರಿತ ಬೀಟ್ ಪದ್ಧತಿ ಹೆಚ್ಚು ಅವಶ್ಯವಾಗಿದೆ. ಸಿಬ್ಬಂದಿ ಕೊರತೆ ಎದುರಿಸುತ್ತಿರುವ ಜಿಲ್ಲೆಯಲ್ಲಿ ಎಲ್ಲ ಜನರಿಗೂ ಪೊಲೀಸರಿಂದ ರಕ್ಷಣೆ ನೀಡಲು ಸಾಧ್ಯವಿಲ್ಲ. ಈ ಹಿಂದೆ ಮೂರ್ನಾಲ್ಕು ಹಳ್ಳಿಗಳಿಗೆ ಒಂದು ಬೀಟ್ ಪದ್ಧತಿ ಇತ್ತು. ಇದರಿಂದ ಪೋಲಿಸರಿಗೆ ಎಲ್ಲ ಮಾಹಿತಿ ಕಲೆ ಹಾಕಲು ಹಾಗೂ ಶೀಘ್ರ ಸ್ಪಂದನೆಗೆ ಸಾಧ್ಯವಾಗುತ್ತಿರಲಿಲ್ಲ. ಆದರೆ ಈ ಪದ್ಧತಿಯಿಂದ ಪ್ರತಿ ಹಳ್ಳಿಗೆ ಒಬ್ಬ ಸಿಬ್ಬಂದಿಯನ್ನು ನೇಮಕ ಮಾಡಿ, ಆಯಾ ಬೀಟ್‍ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುತ್ತದೆ’ ಎಂದು ಹೇಳಿದರು.ಪತ್ರಕರ್ತ ಗಂಗಾಧರ ಹಿರೇಗುತ್ತಿ ಮಾತನಾಡಿ, ಸಮಾಜದಲ್ಲಿ ಏನೆ ತಪ್ಪುಗಳು ನಡೆದರು ನಾವು ಅಲ್ಲಿ ಪೊಲೀಸ್ ಇಲಾಖೆಯೆಡೆಗೆ ಬೊಟ್ಟು ಮಾಡುತ್ತೇವೆ. ಆದರೆ ಸಮಾಜದಲ್ಲಿ ಅಥವಾ ಪೊಲೀಸ್ ವ್ಯವಸ್ಥೆಗೆ ನಮ್ಮ ಕೋಡುಗೆ ಏನು ಎಂಬುದನ್ನು ತಿಳಿದುಕೊಳ್ಳುತ್ತಿಲ್ಲ. ಇದರಿಂದ ಪೊಲೀಸರು ಏಕಾಂಗಿಯಾಗಿದ್ದಾರೆ. ಆದರೆ ಇದೀಗ ನಾಗರಿಕರನ್ನು ಜತೆಯಾಗಿಸಿಕೊಂಡಿರುವ ಸುಧಾರಿತ ಗಸ್ತು ಪದ್ಧತಿ ಹೆಚ್ಚು ಸಹಕಾರಿಯಾಗಿದೆ ಎಂದರು.
ಮೀನುಗಾರ ಮುಖಂಡ ಗಣಪತಿ ಮಾಂಗ್ರೆ ಮಾತನಾಡಿ, ನಾಗರಿಕರು ಪೊಲೀಸರು ಒಂದು ನಾಣ್ಯದ ಎರಡು ಮುಖಗಳಾಗಿವೆ ಎಂದರು. ಸಮಾಜ ಸೇವಕಿ ಅನು ಕಳಸ ಮಾತನಾಡಿ, ಪರಸ್ಪರ ಸಹಕಾರದೊಂದಿಗೆ ಸಮಾಜದಲ್ಲಿ ಶಾಂತಿ ನೆಲಸಲು ಸಹಕಾರ ನೀಡಬೇಕು ಎಂದರು. ಕೆಡಿಎ ಅಧ್ಯಕ್ಷ ಸಂದೀಪ್ ತಳೇಕರ್, ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ್, ನಿವೃತ್ತ ಎಸ್ಪಿ ಕೆ.ಎಸ್.ನಾಯ್ಕ, ಡಿವೈಎಸ್ಪಿ ಎನ್.ಟಿ.ಪ್ರಮೋದರಾವ್, ಜಿ.ಟಿ.ನಾಯ್ಕ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಅವರಿಗೂ, ಇದ್ದರು., ಕೊರತೆ, ಜಿ.ಟಿ.ನಾಯ್ಕ, ಡಿವೈಎಸ್ಪಿ ಎನ್.ಟಿ.ಪ್ರಮೋದರಾವ್, ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ್, ನಡುವಿನ, ನಾಗರಿಕ, ನಿವೃತ್ತ ಎಸ್ಪಿ ಕೆ.ಎಸ್.ನಾಯ್ಕ, ಪೊಲೀಸರ, ಪ್ರೋತ್ಸಾಹ, ಬೀಟ್, ವ್ಯವಸ್ಥೆ, ಶ್ಲಾಘಿಸಬೇಕು. ಆಗ, ಸದಸ್ಯ, ಸಭೆ, ಸಂವಹನದ, ಸಾರ್ವಜನಿಕರು, ಸುಧಾರಿತ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar