ಕಾರವಾರ:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರವಾರ ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲೂಕಿನ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಜುಲೈ 31 ರೊಳಗೆ ಸಲ್ಲಿಸಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
Leave a Comment