ಕಾರವಾರ:
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ” ತಮಗಿದೋ ನಮ್ಮ ಗೌರವ” ಕಾರ್ಯಕ್ರಮ ಆಚರಿಸಲಾಗುವುದು.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸುವರು. ಕಾರವಾರ-ಅಂಕೋಲಾ ಕ್ಷೇತ್ರ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಅನಂತ ಕುಮಾರ ಹೆಗಡೆ , ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರ ಶಾಸಕಿ ಶಾರದಾ ಶೆಟ್ಟಿ ಜಿಲ್ಲಾ ಪಂಚಾಯತ್ ಅದ್ಯಕ್ಷೆ ಜಯಶ್ರೀ ಮೋಗೇರ, ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಭಾಗವಹಿಸುವರು. ಡಾ: ಬಿ.ಆರ್.ಅಂಬೇಡ್ಕರ್ ಕುರಿತು ಡಾ.ವಿಠ್ಠಲ ಭಂಡಾರಿ ಉಪನ್ಯಾಸ ನೀಡುವರು.
Leave a Comment