ಕಾರವಾರ:
ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು.
ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು. ಕಾರ್ಪೋರೇಟ ವಲಯದ ಸುಸ್ತಿ ಸಾಲ ವಸೂಲಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಬ್ಯಾಂಕ್ ಸೇವಾ ಶುಲ್ಕ ಏರಿಕೆ ಮೂಲಕ ಕಾರ್ಪೊರೇÉಟ ಸಾಲ ಬಾಕಿ ಭಾರವನ್ನು ಜನ ಸಾಮಾನ್ಯರಿಗೆ ವರ್ಗಾಯಿಸುವ ಅನ್ಯಾಯದ ಕ್ರಮವನ್ನು ಖಂಡಿಸಿದರು. ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಾಸುದೇವ ಶೇಟ್, ಜಿಲ್ಲಾ ಸಂಘದ ಅಧ್ಯಕ್ಷ ವಿನೋದ ಬಾಂಧೆಕರ, ಪದಾಧಿಕಾರಿಗಳಾದ ವಸಂತ ಶೆಟ್ಟಿ, ಅಶೋಕ ರಾಮದುರ್ಗ, ರವಿಕಾಂತ ತಳೇಕರ, ಯಶ್ವಂತ ನಾಯ್ಕ ಇತರರಿದ್ದರು.
Leave a Comment