ಹಳಿಯಾಳ :
ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೇಸ್ ಸರ್ಕಾರ ಗ್ರಾಮಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಜಿಲ್ಲಾ ಪಂಚಾಯತ, ಸಾರ್ವಜನೀಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಸರ್ಕಾರಿ ಪ್ರೌಢಶಾಲೆ ಮುರ್ಕವಾಡ ಇವರ ಸಂಯುಕ್ತ ಆಶ್ರಯದಲ್ಲಿ 2015-16 ನೇ ಸಾಲಿನಲ್ಲಿ ರಾಜ್ಯ ವಲಯ ಯೋಜನೆಯಡಿಯಲ್ಲಿ ಮಂಜೂರಾದ ನೂತನ ಕೊಠಡಿಗಳ ಉಧ್ಘಾಟನೆಯನ್ನು ನೇರವೆರಿಸಿ ಮಾತನಾಡಿದರು.
ಶಿಕ್ಷಣಕ್ಕಾಗಿ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಯಾರಿಗೂ ಶಿಕ್ಷಣಕ್ಕೆ ತೊಂದರೆಯಾಗದಂತೆ ಮೂಲಭೂತ ಸೌಕರ್ಯವನ್ನು ಒದಗಿಸಿದ್ದು ಅದರ ಪ್ರಯೋಜನವನ್ನು ಪಡೆದು ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಶಿಕ್ಷಣದ ಜೊತೆ ಕ್ರೀಡೆಗಳಲ್ಲಿಯೂ ಭಾಗವಹಿಸುವದರ ಮೂಲಕ ಒಳ್ಳೆಯ ಆರೋಗ್ಯ ಸಂಪಾದಿಸಬಹುದಾಗಿದೆ ಯೋಗಕ್ಕೆ ಮಹತ್ವ ನೀಡಿ ಎಂದ ಸಚಿವರು ವಿದ್ಯಾರ್ಥಿಗಳ ಬೇಡಿಕೆಯಂತೆ ಕಬ್ಬಡ್ಡಿ, ವಾಲಿಬಾಲ್, ಖೋಖೋ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ತಂಡಗಳಿಗೆ ಟ್ರಾಕ್ ಸ್ಯೂಟ್ಗಳನ್ನು ನೀಡುವುದಾಗಿ ಘೊಷಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮಾತನಾಡಿ ಕಾಳಿನದಿ ಏತ ನೀರಾವರಿಗೆ ಟೆಂಡರ್ ಕರೆಯುವ ಮೊದಲು ಮತದಾರರಲ್ಲಿ ಮತ ಕೆಳುವುದಿಲ್ಲವೆಂದು ಹೇಳಿದ್ದ ಸಚಿವರು ನುಡಿದಂತೆ ಮಾಡಿ ತೊರಿಸುವ ಮೂಲಕÀ ವಿರೋಧಿಗಳ ಬಾಯಿ ಮುಚ್ಚಿಸಿದ್ದಾರೆ. ಅದರಂತೆ ಮುಖ್ಯಮಂತ್ರಿ 50 ಸಾವಿರ ಸಾಲ ಮನ್ನಾ ಮಾಡಿದ್ದಾರೆ. ಅದರಂತೆ ಬೆಳೆವಿಮೆ ಕೂಡ ಮಂಜೂರಾಗಿದ್ದು ಸದ್ಯದಲ್ಲೇ ರೈತರ ಖಾತೆಗೆ ಜಮಾ ಆಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಮಾರುತಿ ಕಮ್ಮಾರ ವಹಿಸಿದ್ದರು. ಜಿಪಂ ಉಪಾದ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಕೃಷ್ಣಾ ಪಾಟೀಲ್, ಲಕ್ಷ್ಮೀ ಕೊರ್ವೆಕರ, ಮಹೇಶ್ರಿ ಸಂಜು ಮಿಶ್ಯಾಳಿ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಉಪಾಧ್ಯಕ್ಷೆ ನಿಲವ್ವಾ ಮಡಿವಾಳ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಡಿಡಿಪಿಐ ಎಮ್.ಎಸ್.ಪ್ರಸನ್ನಕುಮಾರ, ನಂದಾ ಗೌಡಾ, ಸೋಮನಿಂಗ ಕೊರ್ವೆಕರ, ಮುಖ್ಯಾಧ್ಯಾಪಕ ಎಸ್.ಜಿ. ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ.ಟಿಸಿ ಮಲ್ಲಾಪುರಮಠ ಕಾರ್ಯಕ್ರಮ ನಿರೂಪಿಸಿದರು.
Leave a Comment