ಕಾರವಾರ:
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ 13 ವರ್ಷದೊಳಗಿರುವ ಬಾಲಕರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ ರೂ. 42,400-00 ಆಗಿರುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಲು ಸಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ವಿವರಣ ಪತ್ರ ಹಾಗೂ ಹಳೆ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, 58 ಫೀಲ್ಡ್ ಮಾರ್ಷಲ್ , ಕೆ.ಎಂ.ಕಾರ್ಯಪ್ಪ ಭವನ, ಫೀಲ್ಡ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ರವರಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 08382-226538ರವರನ್ನು ಸಂಪರ್ಕಿಸುವಂತೆ ಕೋರಿದೆ.
Leave a Comment