ಕಾರವಾರ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಎರಡು ಪ್ರತಿ ತಯಾರಿಸಿ ಎರಡೂ ಪ್ರತಿಯನ್ನು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸುವುದು
ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿsಸಿದ ನಂತರ ಆನ್ ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಎರಡು ಪ್ರತಿ ತಯಾರಿಸಿ ವಿದ್ಯಾರ್ಥಿಗಳು ಓದುತ್ತಿರುವ ಕಾಲೇಜಿನ ಪ್ರಿನ್ಸಿಪಾಲ್ ರವರಿಗೆ ಒಂದು ಪ್ರತಿಯನ್ನು ಇನ್ನೊಂದು ಪ್ರತಿಯನ್ನು ಸಂಭಂಧಿಸಿದ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಮಾಹಿತಿ ಕೇಂದ್ರಗಳಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ ತಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಅಥವಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ 08382-2220336 ಸಂಪರ್ಕಿಸಬಹುದಾಗಿದೆ.
Leave a Comment