ಕಾರವಾರ:
ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋವೊಂದು ಪಲ್ಟಿಯಾಗಿ ಐವರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾದ ಘಟನೆ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ನಗರದ ಖಾಸಗಿ ಶಾಲೆಯಿಂದ ಮಕ್ಕಳನ್ನು ಸಂಜೆ ಮನೆಗೆ ಕರೆದುಕೊಂಡು ಹೊರಟಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡದಿದೆ. ಆಟೋದಲ್ಲಿದ್ದ ಮಕ್ಕಳು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಆದರೆ ಆಟೋದಲ್ಲಿ ಅಧಿಕ ಮಕ್ಕಳನ್ನು ಕರೆದುಕೊಂಡು ಹೋಗಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಇಲ್ಲಿನ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment