ಕಾರವಾರ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ “ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು” ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದರು. ಹಿರಿಯ ನ್ಯಾಯವಾದಿ ಜಿ.ಎನ್. ಜಾಂಬಾವಳೀಕರ್ ಮಹಿಳಾ ಆಸ್ತಿ ಹಕ್ಕು ಕುರಿತು ಉಪನ್ಯಾಸ ನೀಡಿದರು. ನ್ಯಾಯವಾದಿ ರಾಜೇಶ್ವರಿ ಕೆ. ಬಿ ಮಾತನಾಡಿ, ಬಾಲ್ಯ ವಿವಾಹ ನಿಷೇಧದ ಕುರಿತು ಉಪನ್ಯಾಸ ಮಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಎಚ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಸವಿತಾ ಅಂಕೋಲೇಕರ್ ಪ್ರಾರ್ಥಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪದ್ಮರಾಜ ನಾಯ್ಕ ಸ್ವಾಗತಿಸಿದರು. ಮೇಲ್ವಿಚಾರಕಿ ಜಯಂತಿ ದುರ್ಗೇಕರ್ ವಂದಿಸಿದರು.
Leave a Comment