ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು ಮತ್ತು ನಾಪತ್ತೆಯಾಗಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಚಿರತೆಯನ್ನು ಸೇರೆ ಹಿಡಿಯಲು ಯೋಜನೆ ರೂಪಿಸುವದಾಗಿ ಅಧಿಕಾರಿಗಳು ತಿಳಿಸಿದರು.
Leave a Comment