ಹೊನ್ನಾವರ:
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿಯಿಂದ ನಿಯುಕ್ತಿಗೊಂಡ ಉಸ್ತುವಾರಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು, ಕುಮಟಾ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರು ಪಾಲ್ಗೊಳ್ಳುವರು. ಈ ಸಮಾವೇಶಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment