ಹೊನ್ನಾವರ:
ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾಸ್ ತುಂಬಿದ ಬೃಹತ್ ಟ್ಯಾಂಕರ್ ಮಗುಚಿಬಿದ್ದು ಸಾರ್ವಜನಿಕರನ್ನು ಭಯ ಭೀತರನ್ನಾಗಿಸಿತು.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಮಹಾರಾಷ್ಟ್ರದ ಸೂರತ್ಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಚಾಲಕ ಗಾಯಗೊಂಡಿದ್ದಾನೆ. ಟ್ಯಾಂಕರ್ ಪಲ್ಟಿಯಾದ ಸುದ್ದಿ ತಿಳಿದ ತಕ್ಷಣ ಪೋಲಿಸರು ಹಾಗೂ ಅಗ್ನಿ ಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ ಕೆಲಕಾಲ ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ತಡೆದು ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡು ನಂತರ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Leave a Comment