• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ

August 6, 2017 by Sachin Hegde Leave a Comment

ಕಾರವಾರ:

2004 ರಿಂದ ಜಾರಿಗೆ ಬಂದಿರುವ ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು ಮತ್ತು ಏಳನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು.
ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಪ್ರಾರ್ಥಮಿಕ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾರ್ಥಮಿಕ ಶಿಕ್ಷಣ ಆರಂಭಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನಿಷ್ಠ ವರ್ಗಕ್ಕೆ ಒಬ್ಬ ಶಿಕ್ಷಕ ಅತವಾ ಶಿಕ್ಷಕಿಗೆ ಶಾಲೆಗೊಬ್ಬ ಮುಖ್ಯೋಧ್ಯಾಪಕರನ್ನು ನಿಯುಕ್ತಿಗೊಳಿಸುವಂತೆ ಒತ್ತಾಯಿಸಿದರು. ನೂತನ ಪಿಂಚಣಿ ವ್ಯವಸ್ಥೆಯು ದೇಶದ ವಿವಿಧ ಇಲಾಖೆಗಳ ನೌಕರರಿಗೆ ಹಾಗೂ ಶಿಕ್ಷಕರಿಗೆ ಸಮರ್ಪಕವಾಗಿ ದೊರೆಯದಂತಾಗಿದೆ. ಇದು ಅಭದ್ರತೆಯ ಯೋಜನೆಯಾಗಿದ್ದು, ನಿವೃತ್ತ ನೌಕರರಲ್ಲಿ ಆತಂಕ ಸೃಷ್ಠಿಸುತ್ತಿದೆ. ಅಲ್ಲದೆ ನಿವೃತ್ತಿಯಾದವರಿಗೆ ವೃದ್ದಾಪ್ಯದಲ್ಲಿ ಸೂಕ್ತ ಪಿಂಚಣಿ ವ್ಯವಸ್ಥೆ ಸಿಗದೆ ಕಷ್ಟ ಅನುಭವಿಸುವಂತಾಗಿದೆ ಎಂದು ವಿವರಿಸಿದರು.
6ನೇ ವೇತನ ಆಯೋಗದ ಶಿಪಾರಸ್ಸಿನಲ್ಲಿ ವೇತನಕ್ಕಿಂತ ಹೆಚ್ಚಿನದಾಗಿ ಪಿಂಚಣಿ ಕುರಿತಾಗಿ ಒತ್ತು ನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯ ಕೂಡ ಸರಕಾರಿ ನೌಕರರು ನಿವೃತ್ತಿ ನಂತರವೂ ಈ ಹಿಂದಿನಂತೆ ಜೀವನ ನಡೆಸುವಂತಾಗಬೇಕು. ಪಿಂಚಣಿಯು ನೌಕರರು ಗಳಿಸಿದ ಹಣವೇ ಆಗಿದ್ದು, ಸಾರ್ವಜನಿಕ ನೌಕರನಾಗಿ ಸರಕಾರಕ್ಕೆ ಸಲ್ಲಿಸಿದ ಸೇವೆಗೆ ಪ್ರತಿಫಲವಾಗಿ ನೀಡಲಾಗುತ್ತಿದೆ. ಇದು ಪ್ರತಿಯೊಬ್ಬರ ನೌಕರನ ಹಕ್ಕು ಎಂದು ವ್ಯಾಖ್ಯಾನಿಸಿರುವುದದನ್ನು ಉಲ್ಲೇಖಿಸಿ ಮನವಿ ಸಲ್ಲಿಸಿದರು.
ಈ ವಿಷಯವಾಗಿ ಮಾ. 31 ರಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ಸರಕಾರದಿಂದ ಯಾವುದೇ ಪ್ರತಿಕ್ರಿಯೇ ಬಂದಿಲ್ಲ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದಿಂದ ಹೋರಾಟವನ್ನು ಪ್ರಾರಂಭಿಸಲಾಗುತ್ತಿದ್ದು, ಸರಕಾರ ಸೂಕ್ತ ರಿತಿಯಲ್ಲಿ ಸ್ಪಂಸಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಸಂಘದ ಅಧ್ಯಕ್ಷ ನಾರಾಯಣ ಬಿ. ಗಾಂವಕರ್, ಪ್ರಧಾನ ಕಾರ್ಯದರ್ಶಿ ಎನ್.ಎಸ್. ನಾಯ್ಕ, ರತ್ನಾಕರ ನಾಯ್ಕ, ಶಂಕರ ನಾಯ್ಕ, ವಿಜಯ ನಾಯಕ, ಎನ್.ಎಸ್ ನಾಯ್ಕ, ಚಂದ್ರಕಲಾ ನಾಯ್ಕ, ಎಂ.ಜಿ. ನಾಯ್ಕ ಇನ್ನಿತರರು ಹಾಜರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karwar News Tagged With: ಎನ್.ಎಸ್ ನಾಯ್ಕ, ಏಳನೇ, ಒತ್ತಾಯಿಸಿ, ಚಂದ್ರಕಲಾ ನಾಯ್ಕ, ಜಿಲ್ಲಾಡಳಿತ, ಪಿಂಚಣಿ, ಪ್ರತಿಫಲ, ಪ್ರಧಾನ, ಮಂತ್ರಿ, ಮನವಿ, ಮುಖ್ಯೋಧ್ಯಾಪಕ, ಮುಂದವರಿಸಬೇಕು, ಮೂಲಕ, ರದ್ದುಗೊಳಿಸಿ, ವಿಜಯ ನಾಯಕ, ವೇತನ, ವ್ಯವಸ್ಥೆಯನ್ನೆ, ಶಂಕರ ನಾಯ್ಕ, ಶಾಲೆಗೊಬ್ಬ, ಶಿಕ್ಷಕಿಗೆ, ಶಿಪಾರಸ್ಸಿನ, ಸೇವೆಗೆ, ಹಳೆ, ಹೊಸ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar