ಕಾರವಾರ:
2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಇವರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಸೂಕ್ತ ಅಡಕಗಳೊಂದಿಗೆ ಆಯಾ ತಾಲೂಕಿನ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
Leave a Comment